HomeKarnatakaBREAKING : ಮಂಡ್ಯ 'DHO' ಕಿರುಕುಳಕ್ಕೆ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ..!

BREAKING : ಮಂಡ್ಯ ‘DHO’ ಕಿರುಕುಳಕ್ಕೆ ನೇಣು ಬಿಗಿದುಕೊಂಡು ವೈದ್ಯ ಆತ್ಮಹತ್ಯೆ..!

ಬೆಂಗಳೂರು : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ವೈದ್ಯ ನಟರಾಜ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ತಮ್ಮ ನಿವಾಸದಲ್ಲಿ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಮೇಲಾಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯ ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ ಆಗಿ ನಟರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು . ನಟರಾಜ್ ಇಂದು ಮಂಡ್ಯಕ್ಕೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಂತಿದ್ದ ಕಾರಿನಲ್ಲಿ ವೈದ್ಯನ ಶವ ಪತ್ತೆ

ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿತ್ತು. ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿಂತಿದ್ದ ಕಾರಿನಲ್ಲಿ ಕುಳಿತಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular