HomeKarnatakaಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸಾ ಸೌಲಭ್ಯ

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸಾ ಸೌಲಭ್ಯ

ಚಿತ್ರದುರ್ಗ: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.

ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು ತೆಗೆದುಕೊಂಡು ಬರಬೇಕು. ಒಳ ರೋಗಿಗಳಾಗಿ ದಾಖಲಾಗುವ ಸಂದರ್ಭದಲ್ಲಿ ತಪ್ಪದೇ ಎ.ಬಿ.ಆರ್.ಕೆ ಕೊಠಡಿಯಲ್ಲಿ ನೊಂದಣಿ ಮಾಡಿಸಬೇಕು. ಈ ಯೋಜನೆಯಡಿ ನೊಂದಣಿಯಾದ ಅರ್ಹ ಫಲಾನುಭವಿಗೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ರಕ್ತ ಪರೀಕ್ಷೆ, ಸಿ.ಟಿ.ಸ್ಕ್ಯಾನ್, ಎಕ್ಸ್-ರೇ, ಸ್ಕ್ಯಾನಿಂಗ್, ಆರ್ಥೋಇಂಪ್ಲಾಂಟ್, ಔಷಧಿ ಮತ್ತು ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ರೋಗಿಗಳು ಇತ್ತೀಚೆಗೆ ನೇರವಾಗಿ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ತದನಂತರ ರೆಫರೆಲ್‍ಗಾಗಿ ಇಲ್ಲಿನ ವೈದ್ಯಾಧಿಕಾರಿಗಳಿಗೆ ಒತ್ತಡ ತರುತ್ತಿದ್ದಾರೆ. ಆದ್ದರಿಂದ ಈ ರೀತಿ ಮಾಡದೇ ಮೊದಲು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಿರಿ. ಒಂದು ವೇಳೆ ಚಿಕಿತ್ಸೆ ಲಭ್ಯವಿಲ್ಲದಿದ್ದಾಗ ಮಾತ್ರ ಎ.ಬಿ.ಆರ್.ಕೆ. ಅಡಿಯಲ್ಲಿ ರೆಫರೆಲ್ ಮಾಡಿಕೊಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗೆಯೇ ರೋಗಿಗಳು ಆಸ್ಪತ್ರೆಯಲ್ಲಿ ಯಾವುದೇ ಮಧ್ಯವರ್ತಿಗೆ ಹಣ ನೀಡಬೇಕಾಗಿಲ್ಲ. ಒಂದು ವೇಳೆ ಯಾರಾದರು ಹಣ ಕೇಳಿದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ ದೂರವಾಣಿ ಸಂಖ್ಯೆ 9448943163 ಗೆ ಸಂಪರ್ಕಿಸಿ ದೂರು ನೀಡಬಹುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular