BIG NEWS: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ.

ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ವಿಮಾನವನ್ನು ವಾಪಸ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.

ವಿಮಾನದ ಒಂದು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ಹಾರಾಟ ನಡೆಸುತ್ತಿದ್ದಂತೆ ಸಮುದ್ರಮಟ್ಟದಿಂದ ಸುಮಾರು 1000 ಅಡಿ ಎತ್ತರದಲ್ಲಿ ಬೆಂಕಿಯ ಜ್ವಾಲೆ ಎಂಜಿನ್ ನಲ್ಲಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ತಕ್ಷಣ ವಿಮಾನವನ್ನು ವಾಪಸ್ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read