HomeKarnataka5.50 ಲಕ್ಷ ರೂ. ಲಂಚ ಸ್ವೀಕಾರ, ಎಸಿ ಲೋಕಾಯುಕ್ತ ವಶಕ್ಕೆ

5.50 ಲಕ್ಷ ರೂ. ಲಂಚ ಸ್ವೀಕಾರ, ಎಸಿ ಲೋಕಾಯುಕ್ತ ವಶಕ್ಕೆ

ಮೈಸೂರು: ಜಮೀನಿನ ಖಾತೆ ಪ್ರಕರಣ ಇತ್ಯರ್ಥ ಮಾಡಿಕೊಡಲು ಹುಣಸೂರು ಉಪ ವಿಭಾಗಾಧಿಕಾರಿ ಕೆ.ವಿ. ಕಾವ್ಯಾರಾಣಿ ಪರವಾಗಿ ಅವರ ಆಪ್ತ ಸಹಾಯಕ ಶಿವಕುಮಾರ್ 5.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವ್ಯಾರಾಣಿ ಅವರನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಬೆಂಗಳೂರು ಮೂಲದ ವೈದ್ಯೆ ಡಾ. ರೂಪಾ ಅವರು ಹೆಚ್.ಡಿ. ಕೋಟೆ ತಾಲೂಕಿನ ಅಂತರಸಂತೆ ವ್ಯಾಪ್ತಿಯಲ್ಲಿ 4 ಎಕರೆ 31 ಗುಂಟೆ ಜಮೀನಿನ ಖಾತೆಗೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣ ಇತ್ಯರ್ಥ ಪಡಿಸಿ ಖಾತೆ ಮಾಡಿಕೊಡಲು ಎಸಿ 15 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ 10.50 ಲಕ್ಷ ರೂ.ಗೆ ಒಪ್ಪಂದವಾಗಿದ್ದು, ಆದರೂ ಖಾತೆ ಮಾಡಿಕೊಡಲು ಅಲೆದಾಡಿಸುತ್ತಿದ್ದಾರೆ ಎಂದು ವೈದ್ಯೆ ರೂಪಾ ಮೈಸೂರು ಲೋಕಾಯುಕ್ತರಿಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ದಿನಗಳ ಹಿಂದೆ 5 ಲಕ್ಷ ರೂ. ಮುಂಗಡ ನೀಡಲಾಗಿತ್ತು. ಸೋಮವಾರ ಮಧ್ಯಾಹ್ನ ಬಾಕಿ 5.50 ಲಕ್ಷ ರೂ.ಗಳನ್ನು ಕಚೇರಿ ಆವರಣದಲ್ಲಿ ಶಿವಕುಮಾರ್ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಹಣದ ಸಮೇತ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಂತರ ಎಸಿ ಕಾವ್ಯಾರಾಣಿ ಅವರನ್ನು ವಸತಿಗೃಹದಿಂದ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್  ಉಪವಿಭಾಗಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular