HomeKarnatakaBIG NEWS: ಭೀಕರ ಅಪಘಾತ: KPTCL ಸಿಬ್ಬಂದಿ ಸೇರಿ ಮೂವರು ದುರ್ಮರಣ

BIG NEWS: ಭೀಕರ ಅಪಘಾತ: KPTCL ಸಿಬ್ಬಂದಿ ಸೇರಿ ಮೂವರು ದುರ್ಮರಣ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭಸಿದೆ.

ಕೆಪಿಟಿಸಿಎಲ್ ನ ಸಿಬ್ಬಂದಿಗಳಾದ ವೇಣುಗೋಪಾಲ್ (34) ಶ್ರೀಧರ್ (35) ಹಾಗೂ ಬೆಸ್ಕಾಂ ನ ಓರ್ವ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬ್ರಿಜಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ವಾಟದಹೊಸಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದಿದೆ. ಕಳೆದ ರಾತ್ರಿಯೇ ಈ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular