HomeLatest NewsBREAKING NEWS: ಆಟೋ ರಿಕ್ಷಾ- ಬಸ್ ಭೀಕರ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಸಾವು

BREAKING NEWS: ಆಟೋ ರಿಕ್ಷಾ- ಬಸ್ ಭೀಕರ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಸಾವು

ಮಂಗಳೂರು: ಆಟೋ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ನಡೆದಿದೆ.

ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಓರ್ವ ಮಗು ಹಾಗೂ ನಾಲ್ವರು ಮಹಿಳೆಯರು ಕೆ.ಸಿ.ರೋಡ್ ನಿಂದ ರಿಕ್ಷಾದಲ್ಲಿ ಬರುತ್ತಿದ್ದರು. ಈ ವೇಳೆ ರಿಕ್ಷಾ ಬಸ್ ಗೆ ಡಿಕ್ಕಿಹೊಡೆದಿದೆ. ಸ್ಥಳದಲ್ಲೇ ಐವರೂ ಮೃತಪಟ್ಟಿದ್ದಾರೆ.

ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular