HomeUncategorizedBREAKING: ಆಟೋ-KSRTC ಬಸ್ ಭೀಕರ ಅಪಘಾತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

BREAKING: ಆಟೋ-KSRTC ಬಸ್ ಭೀಕರ ಅಪಘಾತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ತಲಪಾಡಿ ಟೋಲ್ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಮುಂದೆ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಬಂದಿದ್ದು, ಹಿಂದೆ ಇದ್ದ ಆಟೋಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಆರೂ ಜನರು ಸಾವನ್ನಪ್ಪಿದ್ದಾರೆ.

ಆಟೋ ಚಾಲಕ, ಮಗು, ಬಾಲಕಿ ಹಾಗೂ ಮೂವರು ಮಹಿಳೆಯರು ಸೇರಿ ಒಟ್ಟು ಆರು ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular