HomeLatest NewsBIG NEWS: ಆಟೋ- ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ಸ್ಥಳದಲ್ಲೇ ದುರ್ಮರಣ

BIG NEWS: ಆಟೋ- ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ಸ್ಥಳದಲ್ಲೇ ದುರ್ಮರಣ

ಪಾಟ್ನಾ: ಆಟೋ ಹಾಗೂ ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯರು ಸೇರಿ 8 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಶಹಜನ್ ಪುರ ಪೊಲೀಸ್ ಠಾಣೆ ಪ್ರದೇಶದ ಹಾಲ್ಟ್ ಬಳಿ ಈ ದುರಂತ ಸಂಭವಿಸಿದೆ. ಗಂಗಾ ಸ್ನಾನಕ್ಕೆಂದು ಯಾತ್ರಾರ್ಥಿಗಳು ಆಟೋದಲ್ಲಿ ಫತುಹಾಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಆಟೋ ಚಾಲಕ, ಇಬ್ಬರು ಮಹಿಳೆಯರು ಸೇರಿ 8 ಜನರು ಮೃತಪಟ್ಟಿದ್ದಾರೆ. ಮೃತರು ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular