HomeKarnatakaಲಾರಿ ಡಿಕ್ಕಿ: ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಲಾರಿ ಡಿಕ್ಕಿ: ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಬೆಂಗಳೂರು: ಲಾರಿ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ ಬೊಮ್ಮನಹಳ್ಳಿ ಬಳಿ ನಡೆದಿದೆ.

ಚಿತ್ರದುರ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ತೆರಳುತ್ತಿದ್ದ ವಿಜಯಕುಮಾರ್ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಆಂಬುಲೆನ್ಸ್ ನಲ್ಲಿದ್ದ ವಿಜಯಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular