ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಆದರೆ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಬುಧವಾರದಂದು ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಘಾಟ್ ಇಳಿಯುತ್ತಿದ್ದಾಗ ಬಸ್ಸಿನ ಬ್ರೇಕ್ ಫೇಲ್ ಆಗಿದೆ. ಆಗ ಸಮಯ ಪ್ರಜ್ಞೆ ಮೆರೆದ ಚಾಲಕ ಮರಕ್ಕೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ್ದಾರೆ.

ಕೋಟಾದ ಪಡುಕೆರೆ ಗ್ರಾಮದ ನಿವಾಸಿಗಳು ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಕೊಪ್ಪಗೆ ಬಂದು ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಇಪ್ಪತ್ತು ಜನರಿದ್ದರು. ಕೆಲವರಿಗೆ ಗಾಯಗಳಾಗಿದ್ದು ಅವರಿಗೆ ಹೆಬ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read