HomeKarnatakaಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಆದರೆ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಬುಧವಾರದಂದು ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಘಾಟ್ ಇಳಿಯುತ್ತಿದ್ದಾಗ ಬಸ್ಸಿನ ಬ್ರೇಕ್ ಫೇಲ್ ಆಗಿದೆ. ಆಗ ಸಮಯ ಪ್ರಜ್ಞೆ ಮೆರೆದ ಚಾಲಕ ಮರಕ್ಕೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಟಾದ ಪಡುಕೆರೆ ಗ್ರಾಮದ ನಿವಾಸಿಗಳು ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಕೊಪ್ಪಗೆ ಬಂದು ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಇಪ್ಪತ್ತು ಜನರಿದ್ದರು. ಕೆಲವರಿಗೆ ಗಾಯಗಳಾಗಿದ್ದು ಅವರಿಗೆ ಹೆಬ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular