ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳುರಿನ ಪೀಣ್ಯ 8ನೇ ಮೈಲಿಯಲ್ಲಿ ನಡೆದಿದೆ.
ಲಕ್ಷ್ಮೀ (30) ಮೃತ ಮಹಿಳೆ. ಮಹಿಳೆ ಲಕ್ಷ್ಮೀ ಪತಿ ಹಾಗೂ ಒಂದು ವರ್ಷದ ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಹಿಂಬದಿಯಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಪತಿ ಹಾಗೂ ಮಗು ಕುದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಘಟನಾ ಸ್ಥಳದಲ್ಲಿ ಪತಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.