HomeKarnatakaಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಯುವಕರು, ಯುವತಿಯರು ಪಾರು

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಯುವಕರು, ಯುವತಿಯರು ಪಾರು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಡ್ರಂಕ್ ಅಂಡ್ ಡ್ರೈವ್ ಪ್ರಕರಣ ನಡೆದಿದೆ. ಅತಿ ವೇಗದಲ್ಲಿ ಚಲಿಸಿದ ಸ್ಕೋಡಾ ಕಾರ್ ನಿಯಂತ್ರಣ ತಪ್ಪಿ ಆಟೋ ಮತ್ತು ಡಸ್ಟರ್ ಕಾರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಕಾರ್ ನಲ್ಲಿದ್ದ ನಾಲ್ವರು ಯುವಕರು, ಯುವತಿಯರು ಪಾರಾಗಿದ್ದಾರೆ. ಜೆಪಿ ನಗರದ ಅಂಡರ್ ಪಾಸ್ ಬಳಿ ಮಧ್ಯರಾತ್ರಿ ಘಟನೆ ನಡೆದಿದೆ. ವೆಗಾಸಿಟಿಯಿಂದ ಜೆಪಿ ನಗರದ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಆರು ಪ್ರಯಾಣಿಕರು ಪಾರಾಗಿದ್ದಾರೆ. ಜಯನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular