BREAKING : ಡಿಸಿಎಂ ಡಿಕೆಶಿ ‘ಸಿಟಿ ರೌಂಡ್ಸ್’ ವೇಳೆ ಪಾಲಿಕೆ ವಾಹನಗಳ ನಡುವೆ ಅಪಘಾತ

‘ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಗರ ರೌಂಡ್ಸ್ ವೇಳೆ ಪಾಲಿಕೆ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಇಂದು ನಡೆದಿದೆ.

ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆಯಿಂದಲೇ ನಗರದಲ್ಲಿ ಸಿಟಿ ರೌಂಡ್ಸ್ ನಡೆಸುತ್ತಿದ್ದು, ಈ ವೇಳೆ ಪಾಲಿಕೆ ವಾಹನಗಳ ನಡುವೆ ಡಿಕ್ಕಿಯಾಗಿದೆ. ಮಾಗಡಿ ರೋಡ್ನಲ್ಲಿ ಡಿಕೆಶಿ ವಾಹನ ಹಿಂಬಾಲಿಸುತ್ತಿದ್ದ ಪಾಲಿಕೆ ಆಯುಕ್ತರ ವಾಹನಕ್ಕೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಪಾಲಿಕೆ ವಾಹನ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಡಿಕ್ಕಿ ಹೊಡೆದ ವಾಹನದಲ್ಲಿ ಕಮಿಷನರ್ ಇರಲಿಲ್ಲ, ಯಾವುದೇ ದುರಂತ ನಡೆದಿಲ್ಲ ಎಂಬುದಾಗಿ ತಿಳಿದು ಬಂದಿದೆ.

ಮಾರ್ಗಮಧ್ಯೆ ದಾರಿ ತಪ್ಪಿದ ಎಸ್ಕಾರ್ಟ್ ವಾಹನ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ಎರಡು ಸ್ಥಳಗಳಿಗೆ ಭೇಟಿ ನೀಡಲಿದ್ದು, ರಸ್ತೆಯಲ್ಲಿ ತೆರಳುವ ವೇಳೆ ಬೆಂಗಾವಲು ವಾಹನ ದಾರಿ ತಪ್ಪಿದ ಘಟನೆ ನಡೆದಿದೆ.

ಡಿಕೆ ಶಿವಕುಮಾರ್ ಅವರಿದ್ದ ವಾಹನ ಬಿಟ್ಟು ಎಸ್ಕಾರ್ಟ್ ವಾಹನ ಮುಂದೆ ಹೋಗಿದ್ದು, ಬಳಿಕ ತಿರುವು ತೆಗೆದುಕೊಂಡು ವಾಪಸ್ ಬಂದಿದೆ. ಅಲ್ಲಿಯ ತನಕ ಮಾರ್ಗಮಧ್ಯೆ ಡಿಕೆ ಶಿವಕುಮಾರ್ ವಾಹನ ನಿಲ್ಲಿಸಿದ್ದಾರೆ. ನಂತರ ಎಸ್ಕಾರ್ಟ್ ವಾಹನ ವಾಪಸ್ ಬಂದ ಬಳಿಕ ಡಿಸಿಎಂ ಮುಂದೆ ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ.ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರ ಜೊತೆಗೆ ಕೂತು ಉಪಹಾರ ಸೇವಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮೊದಲು ಬೆಳಗ್ಗೆ ಬೆಂಗಳೂರಿನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ಗೆ ಹೋಗಿದ್ದರು. ಅಲ್ಲಿ ತಿಂಡಿ ಖಾಲಿಯಾದ ಹಿನ್ನೆಲೆಯಲ್ಲಿ ದಾಸರಹಳ್ಳಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದು, ಅಲ್ಲಿ ಸಾರ್ವಜನಿಕರ ಜೊತೆಗೆ ಕೂತು ಕೇಸರಿಬಾತ್, ಉಪ್ಪಿಟ್ಟು ಸೇವನೆ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read