HomeAutoBREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

BREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ.

ಜಾಲಹಳ್ಳಿ ಮುಖ್ಯ ರಸ್ತೆಯ ಮುಂಭಾಗದಲ್ಲಿರುವ ಫ್ಲೈ ಓವರ್ ನಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಪೀಣ್ಯ ಫ್ಲೈ ಓವರ್ ಮೇಲಿಂದ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪ್ರಸಾದ್ ಮೃತ ಯುವಕ ಎಂದು ಗುರುತಿಸಲಾಗಿದೆ. ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular