HomeLatest NewsBREAKING: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹಾಸನ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.

ಲೋಕೇಶ್ ಹಾಗೂ ಕಿರಣ್ ಮೃತ ದುರ್ದೈವಿಗಳು. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೇಲೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular