HomeLatest NewsBREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬಾಲಕ ಸ್ಥಳದಲ್ಲೇ ಸಾವು!

BREAKING: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬಾಲಕ ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾಮಾಕ್ಷಿಪಾಳ್ಯದ ತೋಟದ ರಸ್ತೆಯಲ್ಲಿರುವ ಸಣ್ಣಕ್ಕಿಬೈಲಿನಲ್ಲಿ ಈ ಘಟನೆ ನಡೆದಿದೆ. ಸೈಕಲ್ ನಲ್ಲಿ ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದ ಬಳಿಕ ಗೂಡ್ಸ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಶಶಾಂಕ್ (12) ಮೃತ ಬಾಲಕ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular