ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಇಂದು ಬೆಳಗಿನ ಜಾವ ಖಾಸಗಿ ಬಸ್ ಪಲ್ಟಿಯಾಗಿದ್ದು, ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಬೆಳಗಾವಿ ಮೂಲದ ಬಸ್ ಚಾಲಕ ಸದಾನಂದ(50) ಹಾಗೂ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮೀರಜ್ ಕಡೆಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.