BREAKING NEWS: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ಮೂವರ ಸಾವು

ಚಿಕ್ಕಬಳ್ಳಾಪುರ: ನಿಯಂತ್ರಣ ತಪ್ಪಿ ಕಾಲುವೆಗೆ ಕಾರ್ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಪಾರಾಗಿದ್ದಾರೆ.

ವೇಗವಾಗಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಕೆಪಿಟಿಸಿಎಲ್ ನ ವೇಣುಗೋಪಾಲ್(34), ಶ್ರೀಧರ್(35) ಬೆಸ್ಕಾಂ ಲೈನ್ ಮ್ಯಾನ್ ಮಂಜಪ್ಪ(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read