HomeLatest NewsBREAKING: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಉದ್ಯಮಿಗಳು ಸ್ಥಳದಲ್ಲೇ ದುರ್ಮರಣ

BREAKING: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಉದ್ಯಮಿಗಳು ಸ್ಥಳದಲ್ಲೇ ದುರ್ಮರಣ

ಪಾಟ್ನಾ: ಬಿಹಾರದ ಪಾಟ್ನಾದ ಪರ್ಸಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಉದ್ಯಮಿಗಳಿದ್ದ ಕಾರು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಅರ್ಧ ಕಾಅರು ಟ್ರಕ್ ಒಳಗೆ ನುಗ್ಗಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು ರಾಜೇಶ್ ಕುಮಾರ್ (55), ಸಂಜಯ್ ಸಿಂಗ್ (50), ಕಮಲ್ ಕಿಶೋರ್ (38) ಪ್ರಕಾಶ್ ಚೌರಾಸಿಯಾ (35) ಮತ್ತು ಸುನೀಲ್ ಕುಮಾರ್ (38) ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರ್ಸಾ ಬಜಾರ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಕಾರನ್ನು ಕತ್ತರಿಸಿ ಅದರೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular