ಟ್ರಕ್ – ಬಸ್ ಡಿಕ್ಕಿಯಾಗಿ 17 ಮಂದಿಗೆ ಗಾಯ; ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ಬುಲಂದ್‌ಶಹರ್‌ನ ದಿಬೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಹಾದೇವ ಚೌರಾಹೆಯ ಬಳಿ ಟ್ರಕ್ ಮತ್ತು ಸ್ಲೀಪರ್ ಕೋಚ್ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 17 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಈ ಅಪಘಾತದ ದೃಶ್ಯ ಸೆರೆಯಾಗಿದೆ. ಕಾರಿನೊಂದಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಟ್ರಕ್ ಚಾಲಕ ವಾಹನವನ್ನು ತಿರುಗಿಸಿದಾಗ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read