ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕ ಸ್ಕೂಟರ್ ಚಾಲನೆ ಮಾಡಿ ಅಪಘಾತಕ್ಕೆ ಕಾರಣವಾದ ಆರೋಪದ ಮೇಲೆ ಸ್ಕೂಟರ್ ಮಾಲೀಕನಿಗೆ ನ್ಯಾಯಾಲಯ 25,000 ರೂ. ದಂಡ ವಿಧಿಸಿ ಆದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರ ನಂತೂರ ಪದವು ಬಳಿ 2025 ರ ಮಾರ್ಚ್ 30ರಂದು ಬೆಳಗಿನ ಜಾವ 3.50ರ ವೇಳೆಗೆ ಬಾಲಕ ಸ್ಕೂಟರ್ ನಲ್ಲಿ ತೆರಳುತ್ತಿದ್ದ. ಈ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಚಾಲನೆ ಮಾಡುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದು, ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಎಸ್ಐ ರೋಸಮ್ಮ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‌ಸಿ ಎಂಟನೇ ನ್ಯಾಯಾಲಯ ನ್ಯಾಯಾಧೀಶರಾದ ಫವಾಝ್ ಪಿ.ಎ. ಅವರು ಬಾಲಕನಿಗೆ ಸ್ಕೂಟರ್ ನೀಡಿದ ಮಾಲೀಕ ಅಬ್ದುಲ್ ಹಮೀದ್ ಗೆ 25,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

