HomeKarnatakaಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಕೊಡಗು : ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಭಾವನಾ (21) ಎಂದು ಗುರುತಿಸಲಾಗಿದೆ. ಈಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಭಾವನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾರ್ಥಿನಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular