BREAKING: ಆಟೋ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಓರ್ವ ಸಾವು, ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಹೊರವಲಯದ ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಕಾರೆಹೊಂಡದ ಆಟೋ ಚಾಲಕ ರಾಘವೇಂದ್ರ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಕಾರೆಹೊಂಡದ ಒಂದೇ ಕುಟುಂಬದ ಮಾಲತಿ(35), ಕೃತಿಕಾ(12), ರಾಮಪ್ಪ(40), ಸಾನ್ವಿಕ(8) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ರಾಘವೇಂದ್ರ ಮೃತದೇಹವನ್ನು ಸಾಗರದ ಸರ್ಕಾರಿ ಉಪವಿಭಾಗೀಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಸಾಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read