HomeKarnatakaಮರಕ್ಕೆ ಕ್ರೂಸರ್ ಡಿಕ್ಕಿ: ಸ್ಥಳದಲ್ಲೇ ಮೂವರು ಕಾರ್ಮಿಕರ ಸಾವು

ಮರಕ್ಕೆ ಕ್ರೂಸರ್ ಡಿಕ್ಕಿ: ಸ್ಥಳದಲ್ಲೇ ಮೂವರು ಕಾರ್ಮಿಕರ ಸಾವು

ಬೆಳಗಾವಿ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15 ಜನ ಗಾಯಗೊಂಡಿದ್ದಾರೆ.

ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಹೊರವಲಯದಲ್ಲಿ ಗುರುವಾರ ಅಪಘಾತ ಸಂಭವಿಸಿದೆ. ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಕೆಂಚಪ್ಪ(60), ಹನುಮಂತ(16), ಮಾಯಪ್ಪ(50) ಮೃತಪಟ್ಟವರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular