HomeKarnatakaBREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.

ಬೈಕ್ ಗೆ ಟಾಟಾ ಏಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಸವಾರ ಗಾಯಗೊಂಡಿದ್ದಾರೆ. ಮೊಹಮ್ಮದ್ ಫಾರುಕ್ ಮತ್ತು ಅಬ್ರಾರ್ ಅಹಮದ್ ಮೃತಪಟ್ಟವರು ಎಂದು ಹೇಳಲಾಗಿದೆ. ಮಹಮ್ಮದ್ ಸಿದ್ದಿಕ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಗ್ಗನಹಳ್ಳಿ ಸಮೀಪ ಮೂವರು ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವೇಳೆ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತ ಬಳಿಕ ಟಾಟಾ ಏಸ್ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಫಾರೂಕ್ ಮತ್ತು ಅಹಮದ್ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ಮೂವರು ಸ್ಕ್ರಾಪ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಓದುತ್ತಿದ್ದರು. ರಂಜಾನ್ ಉಪವಾಸ ಮುಗಿಸಿ ತಂದೆ ಬಳಿ ಹಣ ಪಡೆದು ಚಪ್ಪಲಿ ಖರೀದಿಸಲು ಅಂಗಡಿಗೆ ಹೋಗಿದ್ದ ವೇಳೆ ಅಪಘಾತ ನಡೆದಿದೆ. ಪೀಣ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular