HomeKarnatakaಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಕನಗಲಿ ಗ್ರಾಮದ ಬಸವರಾಜಪ್ಪ(68) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರಿಗೆ ಸೇರಿದ ಕಾರ್ ಡಿಕ್ಕಿಗಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಕಂದಾಯ ಸಚಿವರೊಂದಿಗೆ ಇಲಾಖೆಯ ಮುಖ್ಯ ಕಾರ್ಯದರ್ಶಿ ತೆರಳಿದ್ದರು. ಹಿಂದಿನಿಂದ ಚಾಲಕ ಕಾರ್ ತೆಗೆದುಕೊಂಡು ಹೋಗುವಾಗ ಬೈಕ್ ಗೆ ಡಿಕ್ಕಿಯಾಗಿದೆ. ಬೈಕ್ ಸವಾರ ಬಸವರಾಜಪ್ಪ ಕಾರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular