HomeKarnatakaಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ ಓಬಯ್ಯ(52) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಓಬಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ತಾಯಿ, ಮಕ್ಕಳಿಬ್ಬರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular