HomeKarnatakaBREAKING: ಕೆಲಸಕ್ಕೆ ಹೋಗುತ್ತಿದ್ದಾಗಲೇ ದುರಂತ: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

BREAKING: ಕೆಲಸಕ್ಕೆ ಹೋಗುತ್ತಿದ್ದಾಗಲೇ ದುರಂತ: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

All Posts

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾರೆ.

ತುಮಕೂರಿನ ನವಿಲಹಳ್ಳಿ ನಿವಾಸಿ ಹನುಮಂತರಾಜು(40) ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ಹನುಮಂತರಾಜು ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular