HomeKarnatakaBREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ.

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೇಗವಾಗಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular