HomeKarnatakaಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಇನೋವಾಗೆ ಆಲ್ಟೊ ಕಾರ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು:...

ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಇನೋವಾಗೆ ಆಲ್ಟೊ ಕಾರ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ದುರಂತ ಸಂಭವಿಸಿದೆ.

ಆಲ್ಟೋ ಕಾರ್ ನ ಟೈಯರ್ ಸ್ಪೋಟವಾಗಿ ಇನೋವಾ ಕಾರ್ ಗೆ ಡಿಕ್ಕಿ ಹೊಡೆದಿದ್ದು, ಆಲ್ಟೋ ಕಾರ್ ನಲ್ಲಿದ್ದ ದಂಪತಿ, ಮೂವರು ಪುತ್ರಿಯರು ಸಾವನ್ನಪ್ಪಿದ್ದಾರೆ. ರವಿ ಪೂಜಾರ್(45), ಲಕ್ಷ್ಮಿ ಪೂಜಾರ್(40), ಪುತ್ರಿಯರಾದ ಇಂಚರಾ(15), ಶಾಂತಲಾ(10), ಸಿರಿ ಪೂಜಾರ್(3) ಮೃತಪಟ್ಟವರು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಕೆಂಗೇರಿಯಲ್ಲಿ ರವಿ ಪೂಜಾರ್ ಕುಟುಂಬ ವಾಸವಾಗಿತ್ತು. ರವಿ ಪೂಜಾರ್ ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಕ್ಲರ್ಕ್ ಆಗಿದ್ದರು. ಬೆಂಗಳೂರಿನಿಂದ ಟಿ. ನರಸೀಪುರಕ್ಕೆ ರವಿ ಪೂಜಾರ್ ಕುಟುಂಬ ತೆರಳುತ್ತಿತ್ತು. ಲಂಬಾಣಿ ತಾಂಡ್ಯಾ ಬಳಿ ಆಲ್ಟೋ ಕಾರ್ ನ ಟೈಯರ್ ಸ್ಪೋಟವಾಗಿ ದುರಂತ ಸಂಭವಿಸಿದೆ. ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular