HomeKarnatakaಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪ ಟಿಂಬರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಒಬ್ಬ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲಿಹಾಳ್ – ಅರಹತೊಳಲು ರಸ್ತೆಯಲ್ಲಿ ಶನಿವಾರ ರಾತ್ರಿ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಒಂದೇ ಬೈಕ್ ನಲ್ಲಿದ್ದ ಮೂವರು ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ನಲ್ಲಿದ್ದ ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಗಗನ್ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular