HomeKarnatakaಟ್ಯಾಂಕರ್ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

ಟ್ಯಾಂಕರ್ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು

ಮಂಗಳೂರು: ಉಳ್ಳಾಲ ಸಮೀಪದ ತೊಕ್ಕೊಟ್ಟು -ಮಂಗಳೂರು ವಿಶ್ವವಿದ್ಯಾಲಯ ರಸ್ತೆಯ ಚೆಂಬುಗುಡ್ಡೆ ಕೆರೆಬೈಲು ಬಳಿ ಶನಿವಾರ ಸಂಜೆ ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಸಿಬ್ಬಂದಿ ರಶೀದ್ ಅವರ ಪತ್ನಿ ರೆಹ್ಮತ್(47) ಮೃತಪಟ್ಟವರು ಎಂದು ಹೇಳಲಾಗಿದೆ. ದೇರಳಕಟ್ಟೆ ಕಡೆಯಿಂದ ಸ್ಕೂಟರ್ ನಲ್ಲಿ ತೊಕ್ಕೊಟ್ಟು ಕಡೆಗೆ ದಂಪತಿ ಬರುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಹಂತದಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ರಶೀದ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೊಕ್ಕೊಟ್ಟು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಸರಿಯಿಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಒಂದು ಗಂಟೆಗೂ ಅಧಿಕಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular