HomeKarnatakaರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ದಾವಣಗೆರೆ: ಹಾಲಿನ ವಾಹನ ಡಿಕ್ಕಿಯಾಗಿ ಆಯುರ್ವೇದ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ.

ಮನೋಜ್ ಕುಮಾರ್(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಶ್ವಿನಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ಮನೋಜ್ ಕುಮಾರ್ ದಾವಣಗೆರೆಯ ಹೆಚ್.ಕೆ.ಆರ್. ನಗರದ ನಿವಾಸಿ ಶಿವಕುಮಾರ ಸ್ವಾಮಿ ಅವರ ಪುತ್ರರಾಗಿದ್ದಾರೆ. ರಸ್ತೆ ದಾಟುವಾಗ ಹಾಲಿನ ವಾಹನ ಡಿಕ್ಕಿಯಾಗಿ ಮನೋಜ್ ಮೃತಪಟ್ಟಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular