ಬಾಗಲಕೋಟೆ: ಹಬ್ಬದ ಸಂದರ್ಭದಲ್ಲಿಯೇ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಕಾರು ಹಾಗೂ ಟಂಟಂ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇವ್ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬೀಳಗಿ ತಾಲೂಕಿನ ಅನಗವಾಡಿ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕ್ (27) ಹಾಗೂ ಮೆಹಬೂಬ್ ಶೇಖ್ (30) ಮೃತ ದುರ್ದೈವಿ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.