BIG NEWS: ಭೀಕರ ಅಪಘಾತ: ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಿ.ಮಂಜುನಾಥ್ (52) ಮೃತ ಅಧಿಕಾರಿ. ಫ್ಲೈಓವರ್ ಮೇಲೆ ಕಾರು ಕೆಟ್ಟುನಿಂತಿತ್ತು. ಟೋಯಿಂಗ್ ವಾಹನ ಕರೆಸಿ ಫ್ಲೈಓವರ್ ಸಿಬ್ಬಂದಿ ತೆರವು ಮಾಡುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಾಟಾ ಏಸ್ ವಾಹನ, ಟೋಲ್ ಸಿಬ್ಬಂದಿ ವಾಹನ ಹಾಗೂ ಕಾರು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿ ಬಿದ್ದಿದೆ.

ಅಪಘಾತದಲ್ಲಿ ಮಂಜುನಾಥ್ ಹಾಗೂ ಮತ್ತೋರ್ವ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆಯೇ ಮಂಜುನಾಥ್ ಕೊನೆಯುಸಿರೆಳೆದಿದ್ದಾರೆ.

ಗಾಯಾಳು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗಸ್ಟ್ 10ರಂದು ಮಂಜುನಾಥ್ ಮಗಳ ಮದುವೆ ಇತ್ತು. ಮಗಳ ಮದುವೆ ಆಮಂತ್ರಣ ಪತ್ರಿಕೆ ಹಂಚಿ ನೈಟ್ ಶಿಫ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read