HomeKarnatakaBREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಹಾಸನ: ಹಾಸನ ಹೊರ ವಲಯದ ಈಚನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಐದು ಜನ ಸಾವನ್ನಪ್ಪಿದ್ದಾರೆ.

ಟ್ರಕ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು, ಇಬ್ಬರು ಪುರುಷರು ಸಾವನ್ನಪ್ಪಿದ್ದು, ಟ್ರಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರ್  ನಜ್ಜುಗುಜ್ಜಾಗಿದೆ. ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ.

ಸ್ಥಳಕ್ಕೆ ಹಾಸನ ಎಸ್.ಪಿ. ಮೊಹಮ್ಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular