HomeKarnatakaBREAKING: ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

BREAKING: ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ ಅಪಘಾತ ಸಂಭವಿಸಿದ್ದು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕುಮಾರಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮಾರ್ಗಮಧ್ಯ ಮೂತ್ರ ವಿಸರ್ಜನೆಗಾಗಿ ಕಾರ್ ನಿಂದ ಇಳಿಯುವಾಗ ಅವರಿಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರ ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಎತ್ತಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular