HomeKarnatakaBREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ : ಬೈಕ್ ಸವಾರರ ಮೇಲೆ ಟೆಂಪೋ ಹರಿದು...

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ : ಬೈಕ್ ಸವಾರರ ಮೇಲೆ ಟೆಂಪೋ ಹರಿದು ಮೂವರ ದುರ್ಮರಣ

ಚಿಕ್ಕಬಳ್ಳಾಪುರ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಟೆಂಪೊ ಹರಿದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.

ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ಈ ಘಟನೆ ನಡೆದಿದ್ದು,  ಬೈಕ್ ಹಾಗೂ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ಟೊಮ್ಯಾಟೋ ತುಂಬಿದ್ದ ಟೆಂಪೋ ಸವಾರರ ಮೇಲೆ ಹರಿದಿದೆ. ಘಟನೆಯಲ್ಲಿ ಬೈಕ್ ನಲ್ಲಿ ಇದ್ದ ಇಬ್ಬರು ಪುರುಷರು ಹಾಗೂ ಸ್ಕೂಟಿಯಲ್ಲಿ ತೆರಳುತ್ತಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸುರಕ್ಷಿತವಾಗಿದ್ದಾರೆ. ಅಪಘಾತದ ಬಳಿಕ ಟೆಂಪೋ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular