HomeIndiaBREAKING : ತಮಿಳುನಾಡಿನಲ್ಲಿ ಭೀಕರ ಅಪಘಾತ : ಲಾರಿ ಹರಿದು ಆರು ಮಂದಿ ಪಾದಚಾರಿಗಳು ಸಾವು

BREAKING : ತಮಿಳುನಾಡಿನಲ್ಲಿ ಭೀಕರ ಅಪಘಾತ : ಲಾರಿ ಹರಿದು ಆರು ಮಂದಿ ಪಾದಚಾರಿಗಳು ಸಾವು

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟುನಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಲಾರಿ ಅತಿ ವೇಗದಲ್ಲಿದ್ದು ಮತ್ತು ಮೂರು ಜನ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದರು. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಿಪ್ಪರ್ ಲಾರಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದ್ದು, ಮತ್ತು ಒಂಬತ್ತು ಜನರು ಗಾಯಗೊಂಡಿದ್ದಾರೆ ಮತ್ತು ಜಿಲ್ಲಾ ಆಸ್ಪತ್ರೆ ಸೇರಿದಂತೆ ಚೆಂಗಲ್ಪಟ್ಟುವಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.ಅಪಘಾತಕ್ಕೆ ಕಾರಣವಾದ ಲಾರಿಯ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ ಎಂದು ಚೆಂಗಲ್ಪಟ್ಟು ಪೊಲೀಸ್ ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular