HomeKarnatakaBREAKING: ಕುರಿ ಮಂದೆಯಂತೆ ಮಕ್ಕಳನ್ನು ತುಂಬಿ ಶಿಕ್ಷನಿಂದ ಟಾಟಾ ಏಸ್ ವಾಹನ ಚಾಲನೆ: ಅಪಘಾತದಲ್ಲಿ 15...

BREAKING: ಕುರಿ ಮಂದೆಯಂತೆ ಮಕ್ಕಳನ್ನು ತುಂಬಿ ಶಿಕ್ಷನಿಂದ ಟಾಟಾ ಏಸ್ ವಾಹನ ಚಾಲನೆ: ಅಪಘಾತದಲ್ಲಿ 15 ವಿದ್ಯಾರ್ಥಿಗಳಿಗೆ ಗಾಯ

ತುಮಕೂರು: ಸ್ಥಳೀಯ ಪ್ರವಾಸಿ ತಾಣಕ್ಕೆ ತೆರಳಿ ವಾಪಸ್ ಬರುವಾಗ ಟಾಟಾ ಏಸ್ ವಾಹನ ಪಲ್ಟಿಯಾಗಿ ಶಾಲಾ ಮಕ್ಕಳು ಗಾಯಗೊಂಡ ಘಟನೆ ಗೌಡನಕುಂಟೆಯ ಬಳಿ ನಡೆದಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೌಡನಕುಂಟೆಯ ಬಳಿ ಅಪಘಾತ ಸಂಭವಿಸಿದೆ. ಕೊರಟಗೆರೆ ತಾಲೂಕು ಚಿಂಪುಗಾನಹಳ್ಳಿ ಶಾಲೆಯ ಮಕ್ಕಳು ಗಾಯಗೊಂಡಿದ್ದಾರೆ. ಟಾಟಾ ಏಸ್ ನಲ್ಲಿ ಶಿಕ್ಷಕ ಕೃಷ್ಣಮೂರ್ತಿ 35 ವಿದ್ಯಾರ್ಥಿಗಳನ್ನು ತುಂಬಿದ್ದ.

ಅಲ್ಲದೇ ಶಿಕ್ಷಕ ಕೃಷ್ಣಮೂರ್ತಿಯೇ ಚಾಲನೆ ಮಾಡುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 15 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಕೊರಟಗೆರೆ ಮತ್ತು ತುಮಕೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular