HomeLatest NewsBREAKING: ಟಿಟಿ ವಾಹನ ಡಿಕ್ಕಿ; ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ

BREAKING: ಟಿಟಿ ವಾಹನ ಡಿಕ್ಕಿ; ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ

ಕೋಲಾರ: ಟಿಟಿ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ದಂಪತಿ ಬೈಕ್ ನಲ್ಲಿ ಸ್ವಗ್ರಾಮದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮೃತ ದಂಪತಿಯನ್ನು ರಾಮಾಂಜಲು ಹಾಗೂ ಕಲಾವತಿ ಎಂದು ಗುರುತಿಸಲಾಗಿದೆ. ಮೃತರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯವರೆಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular