HomeKarnatakaಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ ಚಾಲಕನ ವಿರುದ್ಧ ಕೇಸ್ ದಾಖಲು

ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ ಚಾಲಕನ ವಿರುದ್ಧ ಕೇಸ್ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಾಹನ ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಸಚಿವರು ಗಾಯಗೊಂಡಿದ್ದಾರೆ.

ಸಚಿವರ ಸರ್ಕಾರಿ ಕಾರ್ ಚಾಲಕನ ವಿರುದ್ಧ ಕಿತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ಸಚಿವರ ಗನ್ ಮ್ಯಾನ್ ಈರಪ್ಪ ಹುಣಸಿಕಟ್ಟಿ ನೀಡಿದ ದೂರಿನ ಮೇರೆಗೆ ಕಾರ್ ಚಾಲಕ ಜಿ. ಶಿವಪ್ರಸಾದ್ ವಿರುದ್ಧ 281, 125ಎ 125ಬಿ ಅಡಿ ಜೀವಕ್ಕೆ ಕುತ್ತು ತರುವ, ಅಜಾಗರೂಕತೆಯಿಂದ ವಾಹನ ಚಾಲನೆ ಕಲಂಗಳಡಿ ಕಿತ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular