BIG NEWS: ಕುಂಭಮೇಳದಿಂದ ವಾಪಾಸ್ ಆಗುತ್ತಿದ್ದಾಗ ಮತ್ತೊಂದು ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಮಹಾಕುಂಭ ಮೇಳದಿಂದ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಬೀದರ್ ನ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ವರ್ದಾ ಬಳಿ ಟಿಟಿ ವಾಹನ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 14 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರು ಬೀದರ್ ನ ಓಲ್ಡ್ ಸಿಟಿ ದರ್ಜಿ ಗಲ್ಲಿಯ ನಿವಾಸಿಗಳು ಎಂದು ತಿಳಿದುಬಂದಿದೆ. ಐದು ದಿನಗಳ ಹಿಂದೆ ಬೀದರ್ ನ 16ಜನರು ಟಿಟಿ ವಾಹನದಲ್ಲಿ ಉತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಲಕ್ಕೆ ತೆರಳಿದ್ದರು. ಕುಂಭಮೇಳದಿಂದ ಅಯೋಧ್ಯೆ, ಕಾಶಿ, ರಾಮೇಶ್ವರಕ್ಕೆ ಭೇಟಿ ನೀಡಿ ವಾಪಾಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read