BREAKING: ಬಸ್-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಬೆಳಗಾವಿ: ಸಾರಿಗೆ ಬಸ್‌ ಹಾಗೂ ಬೈಕ್ ನಡುವೆ ಮುಖಾ-ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ-ಮಲಾಬಾದ ಬಳಿಯ ಬೆವಣೂರು ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ನೂ‌ರ್ ಸಿರಾಜ್ ಮುಲ್ಲಾ (45) ಮೃತ ದುರ್ದೈವಿ

ಗಾಯಾಳುಗಳಿಬ್ಬರನ್ನೂ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read