HomeKarnatakaಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ರಾತ್ರಿ 9 ಗಂಟೆ ವೇಳೆಗೆ ಚನ್ನಗಿರಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿದ್ದ ಈಶ್ವರ್, ಕೆಲಸ ಮುಗಿಸಿಕೊಂಡು ಭದ್ರಾವತಿಗೆ ಹಿಂತಿರುಗುತ್ತಿದ್ದ ವೇಳೆ ಲಾರಿಯೊಂದು ಬೈಕ್’ ಗೆ ಹೊಡೆದಿದೆ. ಈಶ್ವರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಈಶ್ವರ್ ಅವರ ಪಾರ್ಥಿವ ಶರೀರವನ್ನು ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಈಶ್ವರ್ ಅವರ ಅಕಾಲಿಕ ನಿಧನ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಕುಟುಂಬಸ್ಥರಿಗೂ ಸಹ ಆಘಾತ ನೀಡಿದ್ದು, ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular