HomeKarnatakaಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಕೊಲೆ ಮಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಳಾದ ಮಡ್ಡಿಸಾಬ್ ಗಲಗಲಿ(55) ಕೊಲೆಯಾದ ವ್ಯಕ್ತಿ. ವಾಹನ ಹಾಯಿಸಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅಳಿಯ, ವಿಜಯಪುರದಲ್ಲಿ ಪೊಲೀಸ್ ಕಾನ್ಸ್ ಟೆಬಲ್ ಆಗಿರುವ ಮನ್ಸೂರ ವಾಲೀಕಾರ(42), ಆತನ ಸಹೋದರ ಮೈಬೂಬ ವಾಲಿಕಾರ(40) ಅವರನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 8 ರಂದು ಪತ್ನಿಯೊಂದಿಗೆ ಮಡ್ದೆಸಾಬ್ ಬೈಕ್ ನಲ್ಲಿ ತೆರಳುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದಾಗ ಅಳಿಯ ಮನ್ಸೂರ್ ತನ್ನ ಸಹೋದರನೊಂದಿಗೆ ಸೇರಿ ಕೊಲೆ ಮಾಡಿರುವುದು ಗೊತ್ತಾಗಿದೆ.

ಶಿರೋಳ ಗ್ರಾಮದಲ್ಲಿರುವ ಜಮೀನಿಗೆ ಸಂಬಂಧಿಸಿದ ವ್ಯಾಜ್ಯ ಹಿನ್ನೆಲೆಯಲ್ಲಿ ಕೊಲೆ ನಡೆದಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಮನ್ಸೂರ ಮತ್ತು ಮೈಬೂಬ ಅವರ ವಿಚಾರಣೆ ನಡೆಸಿದಾಗ ಕೊಲೆ ವಿಷಯ ಬೆಳಕಿಗೆ ಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular