HomeCrimeBREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ.

ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಭಾರ್ಗವ್ ನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೋಲಾರದಿಂದ ಹೊಸಕೋಟೆ ಕಡೆ ಕಾರ್ ನಲ್ಲಿ ಭಾರ್ಗವ್ ಬರುತ್ತಿದ್ದಾಗ ಅವರ ಕಾರ್ ಚೇಸ್ ಮಾಡಿದ ದುಷ್ಕರ್ಮಿಗಳು ಬ್ರೇಕ್ ಹಾಕಿದ್ದಾರೆ. ಈ ವೇಳೆ ಆರೋಪಿಗಳ ವಾಹನಕ್ಕೆ ಭಾರ್ಗವ್ ಕಾರ್ ಡಿಕ್ಕಿಯಾಗಿದೆ.

ಇದೇ ನೆಪದಲ್ಲಿ ಗಲಾಟೆ ಮಾಡಿ ಲಾಂಗ್, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯ ನಂತರ ವಾಹನ ಸಮೇತ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular