HomeLatest NewsBREAKING: ಮರಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಸಾಫ್ಟ್ ವೇರ್ ಇಂಜಿನಿಯರ್ ಸೇರಿ ಇಬ್ಬರು ಸ್ಥಳದಲ್ಲೇ...

BREAKING: ಮರಕ್ಕೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಸಾಫ್ಟ್ ವೇರ್ ಇಂಜಿನಿಯರ್ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ಜಮೀನು ನೋಡಿಕೊಂಡು ವಾಪಸ್ ಆಗುತ್ತಿದ್ದಾಗ ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ನಡೆದಿದೆ.

ಗೌರಿಬಿದನೂರು ಮೂಲದ ಹರೀಶ್ ಹಾಗೂ ವೀರಭದ್ರ ಮೃತ ದುರ್ದೈವಿಗಳು. ಹರೀಶ್ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕುಟುಂಬ ಸಮೇತ ಕಾರಿನಲ್ಲಿ ಜಮೀನು ನೋಡಿಕೊಂಡು ಹಾಗೇ ಊರಿಗೆ ಹೋಗಿ ಬರಲೆಂದು ಹೊರಟಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಮೀನು ನೋಡಿಕೊಂಡು ಊರಿಗೆ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ಹರೀಶ್ ಹಾಗೂ ವೀರಭದ್ರ ಇಬ್ಬರೂ ಸಾವನ್ನಪ್ಪಿದ್ದಾರೆ. ಹರೀಶ್ ಪತ್ನಿ ಮೈತ್ರಿ, ಇಬ್ಬರು ಮಕ್ಕಳು ಹಾಗೂ ಗಂಗಮ್ಮ ಎಂಬುವವರು ಗಾಯಗೊಂಡಿದ್ದಾರೆ. ಅವರಲ್ಲಿ ಮೈತ್ರಿ ಸ್ಥಿತಿ ತೀವ್ರ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular