ಚಿಕ್ಕಬಳ್ಳಾಪುರ: ಲಾರಿ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಸೇರೊ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಪೌರ ತಾಲೂಕಿನ ಗೌರಿಬಿದನೂರಿನಲ್ಲಿ ನಡೆದಿದೆ.’
ಇಲ್ಲಿನ ಕುಡಮಲಕುಂಟೆ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐದು ತಿಂಗಳ ಗರ್ಭಿಣಿ ನೂರಿ (35) ಹಾಗೂ ಪತಿ ಯಾಸಿನ್ ಖಾನ್ (45) ಮೃತ ಪಟ್ಟಿದ್ದಾರೆ.
ಮೃತ ದಂಪತಿ ಸಂಬಂಧಿಕರ ಮನೆಗೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.